Breaking News

ಬಸವಣ್ಣನವರನ್ನು ಕರ್ನಾಟಕದಸಾಂಸ್ಕೃತಿಕ ನಾಯಕ’ನೆಂದು ಘೋಷಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದವರು

A petition was submitted to Chief Minister Siddaramaiah to declare Basavanna as the Cultural Leader of Karnataka

ಜಾಹೀರಾತು
Screenshot 2024 01 08 18 59 12 42 6012fa4d4ddec268fc5c7112cbb265e7 300x196

ಬೆಂಗಳೂರು, 8: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತರ‍್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ರ‍್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಸ್ವಾಮೀಜಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕರ‍್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ರ‍್ಚಿಸಿದ ಬಳಿಕ ಮಾತನಾಡಿದರು.

“ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತರ‍್ಮಾನಿಸಲಾಗುವುದು” ಎಂದರು. ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚರ‍್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪರ‍್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ ೪೮ ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕರ‍್ಯರ‍್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.

ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ರ‍್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮರ‍್ತಿ, ಹೋರಾಟಗರ‍್ತಿ ಸೌಮ್ಯ, ಅಖಿಲಾ ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.