Breaking News

ಮಾರ್ಚ 2, 3ಕ್ಕೆಕನಕಗಿರಿ ಉತ್ಸವನಡೆಸಲುನಿರ್ಧಾರ: ಸಚಿವರಾದಶಿವರಾಜ ತಂಗಡಗಿ

To conduct Kanakagiri Utsav on March 2, 3 Decision: Minister Shivraj Thandagi

ಜಾಹೀರಾತು
Screenshot 2024 02 03 21 23 20 85 680d03679600f7af0b4c700c6b270fe7 1 248x300

ಕೊಪ್ಪಳ ಜಿಲ್ಲೆಯ ಜನರ ಬಹುನಿರೀಕ್ಷೆಯ ಕನಕಗಿರಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಿಳಿಸಿದಂತೆ ಇದೀಗ ದಿನಾಂಕ ನಿಗದಿಪಡಿಸಿ ಜಿಲ್ಲೆಯ ಜನರ ಸಂಭ್ರಮ ಹೆಚ್ಚಿಸಿದ್ದಾರೆ.
ಕನಕಗಿರಿ ಉತ್ಸವ ನಡೆಸುವ ಸಂಬAಧ ಕನಕಗಿರಿಯ ಕನಕಾಚಲಪತಿ ದೇವಸ್ಥಾನದಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಚಿವರಾದ ಶಿವರಾಜ ತಂಗಡಗಿ ಅವರು ಫೆ.3ರಂದು ಪೂರ್ವಭಾವಿ ಸಭೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉತ್ಸವ ಆಚರಣೆಗೆ 2.5 ಕೋಟಿ ರೂ. ಅನುದಾನವನ್ನು ಈಗಾಗಲೇ ಮಂಜೂರಿ ಮಾಡಲಾಗಿದೆ. ಉತ್ಸವ ನಡೆಸುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. ಮಾರ್ಚ 2 ಮತ್ತು 3 ರಂದು ಉತ್ಸವ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅದೇ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ, ಸ್ತಬ್ಧ ಚಿತ್ರ, ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆ, ಮನರಂಜನೆ ಕಾರ್ಯಕ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜಿಸಿದ್ದೇವೆ ಎಂದು ತಿಳಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.