Breaking News

ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

Demand for the establishment of a scientific academy

ಜಾಹೀರಾತು

ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಬಾವಿ ಮಾತನಾಡಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ. ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮೌಡ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ. ಇದಕ್ಕೆ ಪೂರಕವಾಗಿ ಸರಕಾರದ ವತಿಯಿಂದ “ವೈಜ್ಞಾನಿಕ ಅಕಾಡೆಮಿ”ಯನ್ನು ಸ್ಥಾಪಿಸುವ ಮೂಲಕ ಪರಿಷತ್ತಿನ ಕಾರ್ಯಕ್ಕೆ ಶಕ್ತಿ ತುಂಬಬೇಕು ಎಂದು ಒತ್ತಾಯಿಸಲಾಯಿತು. ಈ ಕುರಿತು ಸರ್ಕಾರ ಆಸಕ್ತಿವಹಿಸಿ ಆದಷ್ಟು ಶೀಘ್ರ ಅಕಾಡೆಮಿ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಜ್ಞಾನಿಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರು ಮನವಿಯನ್ನು ಸರಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ಸದಸ್ಯರಾದ ಕುಬೇರ ಮಜ್ಜಿಗಿ, ಅಮರೇಶ ಪಾಟೀಲ್, ನಿಂಗಜ್ಜ ಶಹಪುರ್, ಆನಂದ ಕಿನ್ನಾಳ, ಹನುಮಂತಪ್ಪ ಕುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.