Drinking water problem helpline center started
ತಾವರಗೇರಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಭವಣೆ ಸಮಸ್ಯೆ ಉಂಟಾದಲ್ಲಿ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಇವರ ನಿರ್ದೇಶನದಂತೆ ಪಟ್ಟಣ ಪಂಚಾಯತಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನಬಿಸಾಬ ಹೆಚ್ ಖುದಾನವರ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುತ್ತಾರೆ. ಬೇಸಿಗೆ ಬಿಸಿಲು ಆರಂಭವಾಗಿದ್ದು ಈ ಬೇಸಿಗೆ ದಿನದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಎಂಬ ದೂರ ದೃಷ್ಟಿಯಿಂದ ಈ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ.
ಪಟ್ಟಣದ ಯಾವುದೇ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ ಅಥವಾ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿ ಕೇಂದ್ರ ಸಂಖ್ಯೆ ೯೯೦೦೫೭೨೧೨೦, ೮೯೭೧೦೧೪೩೫೧ ಕರೆ ಮಾಡಿ ನಿಮ್ಮ ದೂರನ್ನು ದಾಖಲಿಸಿ ಅದಕ್ಕೆ ಪರಿಹಾರವನ್ನು ಪಡೆದುಕೊಳ್ಳಬಹುದು ಎಂದು ಸಾರ್ವಜನಿಕರಲ್ಲಿ ಪಪಂ ಮುಖ್ಯಾಧಿಕಾರಿ ನಬಿಸಾಬ ಹೆಚ್ ಖುದಾನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.