ರಾಷ್ಟೀಯಪಲ್ಸ್ ಪೋಲಿಯೋಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಡಿಸಿಎಂ,ಶಾಸಕ ಶ್ರೀ ಲಕ್ಷ್ಮಣ ಸಂ. ಸವದಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Rashtiyapals polio program was inaugurated by former DCM, legislator Shri Lakshmana. the taste

ಜಾಹೀರಾತು

ಅಥಣಿ : ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಬೇಕೆಂಬ ದೃಷ್ಟಿಯಿಂದ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಜೊತೆಗೆ ಅನೇಕ ಸಂಘ ಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಸ್ವಯಂ ಸೇವಕರು ಸೇರಿ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಅಥಣಿ ಶಾಸಕರಾದ ಶ್ರೀ ಲಕ್ಷ್ಮಣ ಸವದಿ ಅವರು ಹೇಳಿದರು.
ಅವರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ರಾಷ್ಟೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಎಲ್ಲ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು, ನಾಲ್ಕು ದಿನಗಳ‌ ಕಾಲ ಜರುಗುತ್ತಿರುವ ಈ ಅಭಿಯಾನದಲ್ಲಿ ಎಲ್ಲರೂ ತಮ್ಮ‌ ಮಕ್ಕಳಿಗೆ ಪೋಲಿಯೋ ಹಾಕಿಸಿ ಸರಕಾರದ ಯೋಜನೆಗೆ ಕೈಜೋಡಿಸಬೇಕು ಎಂದರು.
ಮುಖ್ಯ ವೈದ್ಯಾಧಿಕಾರಿ ಡಾ ಬಸಗೌಡ ಕಾಗೆ ಅವರು ಮಾತನಾಡಿ, ತಾಲೂಕಿನ ಎಲ್ಲ ಕಡೆ ಪೋಲಿಯೊ ಲಸಿಕೆ ವ್ಯವಸ್ಥೆಯನ್ನು ಮಾಡಲಾಗಿದ್ದು ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹಾಕಿಸಿ ಎಂದರು‌.
ಕಾರ್ಯಕ್ರಮದಲ್ಲಿ ಹಲವು ಮುಖಂಡರು, ಪುರಸಭೆ ಸದಸ್ಯರು, ಸಾರ್ವಜನಿಕರು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

Total Views: 0
Share This Article