Breaking News

ಬೆಂಗಳೂರು ಸೆಂಟ್ರಲ್ ನಿಂದ ಸ್ಪರ್ಧಿಸಲು ಕ್ರೈಸ್ತರಿಗೆ ಟಿಕೆಟ್ ನೀಡಲು ಒತ್ತಾಯ.

Forced to give tickets to Christians to contest from Bengaluru Central.

ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಅಧ್ಯಕ್ಷ ರಪಾಯಲ್ ರಾಜ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬರ್ತಲೋಮಿಯೊ 30 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಪಕ್ಷ ನಿಷ್ಠೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಬೇಕು ಹಾಗೂ ಕ್ರೈಸ್ತರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಆಗ್ರಹಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಕ್ರೈಸ್ತರು ಕಾಂಗ್ರೆಸ್ ಪರವಾಗಿ ಎಲ್ಲಾ ಚುನಾವಣೆಗಳಲ್ಲೂ ಮತ ನೀಡಿದ್ದಾರೆ. ಅಲ್ಪ ಸಂಖ್ಯಾತರಾದ ಕ್ರೈಸ್ತರು ಅಂದಿನಿಂದಲೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದಾರೆಂದು ವಿಷಾದದಿಂದ ನಮ್ಮ ಸಂಘಟನೆ ಹೇಳಬಯಸುತ್ತಿದೆ. ಆದರೂ ಶಾಂತಿ ಪ್ರಿಯರಾದ ನಮ್ಮ ಧರ್ಮಿಯರು ಯಾವುದೇ ರೀತಿಯ ಒತ್ತಡವನ್ನು ಕಾಂಗ್ರೆಸ್ ಪಕ್ಷದ ಮೇಲಾಗಲಿ ಅಥವಾ ರಾಜಕಾರಣಿಗಳ ಮೇಲಾಗಲಿ ಹೇರಿಲ್ಲ. ಶಾಂತಿಯುತವಾಗಿ ಎಲ್ಲ ಚುನಾವಣೆಗಳಲ್ಲೂ ಕ್ರೈಸ್ತ ಧರ್ಮಿಯರಿಗೆ ಸೂಕ್ತ ಸಂಖ್ಯೆಯ ಟಿಕೆಟ್ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಪಕ್ಷ ಸೂಕ್ತ ಅವಕಾಶಗಳನ್ನು ನೀಡಿಲ್ಲ ಎಂಬುದು ದುರಾದೃಷ್ಟಕರ ಸಂಗತಿ ಎಂದರು.

ಬೆಂಗಳೂರು ಕೇಂದ್ರ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ರೈಸ್ತ ಧರ್ಮಿಯರು ಬಹು ಸಂಖ್ಯಾತರಿದ್ದಾರೆ. ಅಷ್ಟೇ ಅಲ್ಲ ಮುಸ್ಲಿಂರಷ್ಟೆ ಸಂಖ್ಯೆಯ ಮತದಾರರಿದ್ದಾರೆ. ಈ ಕ್ಷೇತ್ರದಿಂದ ಕ್ರೈಸ್ತ ಧರ್ಮಿಯರಿಗೆ ಲೋಕ ಸಭಾ ಟಿಕೆಟ್ ನೀಡಿದರೆ ಈ ಕ್ಷೇತ್ರದಿಂದ ಬರ್ತಲೋಮಿಯೊ ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತರು ನೀಡಿರುವ ನಿರಂತರವಾದ ಬೆಂಬಲ ಮತ್ತು ರಾಜ್ಯಕ್ಕೆ ಕ್ರೈಸ್ತ ಮಿಷನರಿಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸುವಂತೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದರು. ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಉಪಾಧ್ಯಕ್ಷ ಜಾನ್ ಬ್ರಿಟೋ ಸಂಘದ ಪದಾಧಿಕಾರಿಗಳಾದ ಮರಿಜಾನ್, ಥಾಮಸ್, ಭಾಗವಹಿಸಿದ್ದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.