Against the authority charging extra money to Darshanaka who became the owner of crores: the anger of the devotees.
ವರದಿ :ಬಂಗಾರಪ್ಪ ಸಿ .
ಹನೂರು : ಕ್ಷೇತ್ರದ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ
ಮಲೆ ಮಾದೇಶ್ವರ ಬೆಟ್ಟದಲ್ಲಿ : 25 ದಿನಗಳಲ್ಲಿ 3.13 ಕೋಟಿ ರೂ. ಸಂಗ್ರಹವಾಗಿರುವುದು ಸಂತೋಷದ ವಿಷಯ ಆದರೆ ತುರ್ತು ಸಂದರ್ಭದಲ್ಲಿ ಸಾಮಾನ್ಯ ಜನರು ದರ್ಶನ ಮಾಡಬೇಕಾದರೆ ಬಹಳ ಕಷ್ಟವಾಗಿದೆ ಅದ್ದರಿಂದ ಪ್ರಾಧಿಕಾರದವರು ತಕ್ಷಣದಿಂದಲೆ ಜಾರಿಗೆ ಬರುವಂತೆ ಕಾರ್ಯಪ್ರವೃತರಾಗಬೇಕಾಗಿದೆ ಎಂದು ರೈತ ಮುಖಂಡರು ತಿಳಿಸಿದರು .
ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10.30ರ ಗಂಟೆಯವರೆಗೂ
ನಡೆಯಿತು.
ಈ ಬಾರಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ,
ಸರ್ಕಾರಿ ರಜಾ ದಿನಗಳು ಹಾಗೂ ಶಕ್ತಿ ಯೋಜನೆ
ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ 3,13,00,931 ರೂ. ಸಂಗ್ರಹವಾಗಿದೆ. 47 ಗ್ರಾಂ ಚಿನ್ನ ಮತ್ತು 2 ಕೆಜಿ 309ಗ್ರಾಂ ಬೆಳ್ಳಿ ಸಂಗ್ರಹವಾಗಿದೆ..
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.ಹುಂಡಿಯಲ್ಲಿ ವಿದೇಶಿ ನೋಟುಗಳು ಇದಲ್ಲದೆ ಯು ಎಸ್ ಎ, ಬಾಂಗ್ಲಾದೇಶ, ನೇಪಾಳ, ಮಲೇಶಿಯಾ ಸೇರಿದಂತೆ 7 ವಿದೇಶಿ ನೋಟುಗಳು, ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2,000 ರೂ. ಮುಖ ಬೆಲೆಯ 26 ನೋಟುಗಳು ಹುಂಡಿಯಲ್ಲಿ ದೊರೆತಿದೆ.
ಎಂದು ತಿಳಿದು ಬಂದಿದೆ