Breaking News

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರ ಅಧ್ಯಕ್ಷತೆಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ಶುಕ್ರವಾರ ರಾತ್ರಿ ಮತದಾನ ಜಾಗೃತಿ ಮೂಡಿಸಲಾಯಿತು.

ಗ್ರಾಮದ ಚುನಾವಣೆ ರಾಯಭಾರಿಗಳಾದ ತೃತಿಯ ಲಿಂಗಿಗಳಾದ ಶರಣಮ್ಮ ಹಾಗೂ ರಾಜಶೇಖರ ಅವರು ನನ್ನ ಮತ, ನನ್ನ ಹಕ್ಕು ಚುನಾವಣೆ ಘೋಷವಾಖ್ಯಕ್ಕೆ ಮೇಣದಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನ ಮಾಡಬೇಕು. ಯಾರೂ ಕೂಡ ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗಬಾರದು. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. 2024 ರ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ನಂತರ ಮತದಾನ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಗ್ರಾ.ಪಂ. ಕಾರ್ಯಾಲಯದ ಮುಂದೆ ಬಿಡಿಸಲಾಗಿದ್ದ ವಿವಿಪ್ಯಾಟ್ ಚಿತ್ರದ ರಂಗೋಲಿ ಎಲ್ಲರ ಗಮನ ಸೆಳೆಯಿತು.

ಬಸಾಪಟ್ಟಣ ಗ್ರಾಪಂ ಪಿಡಿಓ ವಿದ್ಯಾವತಿ, ಕಾರ್ಯದರ್ಶಿಗಳಾದ ನಾಗೇಶ ಸಜ್ಜನ್, ಎಸ್ ಡಿಎ ಶ್ರೀನಿವಾಸ, ತಾಲೂಕು ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾ.ಪಂ. ಸಿಬ್ಬಂದಿಗಳು, ಎನ್ ಆರ್ ಎಲ್ ಎಂ ಎಂ.ಬಿ.ಕೆ., ಸ್ವಸಹಾಯ ಗುಂಪುಗಳ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.