
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ಕಿರುಕುಳ : ಕಾಂಗ್ರೇಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ

Gandhi family harassed in National Herald case: Congress workers lay siege to BJP office
ಕೊಪ್ಪಳ; ನ್ಯಾಷನಲ್ ಹೆರಾಲ್ಡ್ ಆಂಗ್ಲ ಪತ್ರಿಕೆ ಸುಳ್ಳು ಪ್ರಕರಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಸಿಲುಕಿಸಿ, ಅವರಿಗೆ ಅನಾವಶ್ಯಕವಾಗಿ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುವ ಮೂಲಕ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಬಿಜೆಪಿ ಜಿಲ್ಲಾ ಕಚೇರಿಯನ್ನು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಬಂದರು, ದಾರಿಯುದ್ದಕ್ಕೂ ಬಿಜೆಪಿ, ಮೋದಿ ಶಾ ವಿರುದ್ಧ ಘೋಷಣೆ ಕೂಗಿದರು. ನಗರದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೇಸ್ ಕಾರ್ಯಕರ್ತನ್ನು ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಕಾರ್ಯಕರ್ತರು ಬಿಜೆಪಿ ಕಚೇರಿಯ ಮುಂದೆ ಪ್ರತಿಭಟಿಸಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು. ಇದರ ಬಗ್ಗೆ ಮಾಹಿತಿ ಇದ್ದ ಕಾರಣ ಬಿಜೆಪಿ ಕಚೇರಿಗೆ ಬೀಗ ಹಾಕಲಾಗಿತ್ತು.
ಈ ಸಂದರ್ಭದಲ್ಲಿ ಮಾಜಿ ಜಿ. ಪಂ. ಉಪಾಧ್ಯಕ್ಷ ಯಂಕಣ್ಣ ಯರಾಶಿ ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಾ ಇಟ್ಟಂಗಿ ಮತ್ತು ಅಕ್ಬರ್ ಪಾಶಾ, ಕಾಂಗ್ರೆಸ್ ವಕ್ತಾರೆ ಶೈಲಾಜಾ ಹಿರೇಮಠ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಕೃಷ್ಣಾ ಗಲಿಬಿ ಮತ್ತು ಶಾಮೀದ್ ಮನಿಯಾರ್, ಮಾಜಿ ಜಿ.ಪಂ. ಸದಸ್ಯ ಪ್ರಸನ್ನ ಗಡಾದ, ಮುತ್ತುರಾಜ್ ಕುಷ್ಟಗಿ, ಗಾಳೆಪ್ಪ ಪೂಜಾರ್, ಗುರುರಾಜ ಹಲಗೇರಿ, ಕಿಶೋರಿ ಬೂದನೂರು, ಮಲ್ಲು ಪೂಜಾರ್, ಸುರೇಶ ದಾಸರಡ್ಡಿ, ಗವಿಸಿದ್ದನಗೌಡ ಪಾಟೀಲ್, ಚಾಂದಪಾಶಾ ಕಿಲ್ಲೆದಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




