Chief Minister's Akka Cafe to be inaugurated on October 6

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ)-ಸAಜೀವಿನಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಅಂದಾಜು ರೂ.20 ಲಕ್ಷಗಳ ವೆಚ್ಚದ ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಹೊಸಪೇಟೆ ರಸ್ತೆಯ ಮಾರುತಿ ಸುಜುಕಿ ಶೋರೂಮ್ ಎದುರಿನ ಅಗಡಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕ ಕೆಫೆಯನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನ್‌ಸಾಬ್ ನಬಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ.ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ ಶುಕ್ಲಾ, ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆಯ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ರಾಷ್ಟಿçÃಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಸ್ನೇಹಲ್ ಆರ್. ಆಗಮಿಸುವರು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.