Breaking News

ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ: ಸುಬ್ಬರಾಮ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

The short URL of the present article is: https://kalyanasiri.in/j1lr

ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ: ಸುಬ್ಬರಾಮ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಜಾಹೀರಾತು
Union Minister Prahlad Joshi presents award to Karnataka Arya Vaishya Lifetime Achievement Award: Subbarama Shetty

Screenshot 2025 11 18 17 54 07 48 6012fa4d4ddec268fc5c7112cbb265e72547737128341528301

ಬೆಂಗಳೂರು; ಇಳಿ ವಯಸ್ಸಿನಲ್ಲೂ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ, ಚಿರ ಯುವಕರಂತೆ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿರುವ, ಶೈಕ್ಷಣಿಕ , ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನರ್ಘ್ಯ ಸೇವೆಸಲ್ಲಿಸಿದ ಸಮಾಜಬಂಧು ಸುಬ್ಬರಾಮ ಶೆಟ್ಟರು. ಅವರಿಗೆ ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ ಗೌರವ ಸಲ್ಲಿಸಲಾಗಿದೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗು ಕನ್ನಡ ಪ್ರಭ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಇವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸುಬ್ಬರಾಮ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿದರು.

ಎ.ಪಿ.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಿ ಎ.ಡಾ.ವಿಷ್ಣುಭರತ್ ಆಲಂಪಲ್ಲಿ ಮಾತನಾಡಿ, ತಮಗೆ ಜಿ.ಕೆ. ಸುಬ್ಬರಾಮ ಶೆಟ್ಟಿ ಮಾದರಿಯಾಗಿದ್ದು, ಅವರ ಪ್ರೇರಣೆಯಿಂದ ತಾವು ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಸಂಸದ ಪಿ.ಸಿ. ಮೋಹನ್‌, ವಿಧಾನಪರಿಷತ್‌ ಸದಸ್ಯ ಡಿ.ಎಸ್.‌ ಅರುಣ್, ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಆರ್.ವಿ. ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಗೆ ಕಾರಣೀಭೂತರಾದ ಶಿಕ್ಷಣತಜ್ಞ. ಬಡಮಕ್ಕಳಿಗೆ ನೆರವಾದ ಸಮಾಜಮುಖಿ ಉದ್ಯಮಿ. ಸುಶಿಕ್ಷಿತ ಕುಟುಂಬದ ಕುಡಿಯಾದ ಸುಬ್ಬರಾಮ ಶೆಟ್ಟಿ, ಅವರು ಬಿಎಸ್ಸಿ, ಟೆಕ್ಸ್ಟೈಲ್ಸ್ ಪದವೀಧರರು. ಆರ್.ವಿ.ಶಿಕ್ಷಣ ಸಂಸ್ಥೆಯ ಕೋಶಾಧ್ಯಕ್ಷರಾಗಿ ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ದುಡಿದು ಸಂಸ್ಥೆಯ ಪ್ರಗತಿಗೆ ಅಮೂಲ್ಯ ಕಾಣಿಕೆ ಕೊಟ್ಟದ್ದಾರೆ.

ವಾಸವಿ ಟ್ರಸ್ಟ್ ಅಧ್ಯಕ್ಷರಾಗಿ ಆಸ್ಪತ್ರೆ, ಕನ್ವೆನ್ಷನ್ ಹಾಲ್ ನಿರ್ಮಾಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟದಲ್ಲಿ ಮಾರುತಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾಗಿ ಹಳ್ಳಿಮಕ್ಕಳಲ್ಲಿ ಅಕ್ಷರ ಜ್ಯೋತಿ ಬೆಳಗಿದವರು. ಜೀವನಸಂಧ್ಯಾ ಟ್ರಸ್ಟ್ ಅಧ್ಯಕ್ಷರಾಗಿ ವೃದ್ಧರ ಹಾಗೂ ಎಪಿಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.
ಜನಸೇವಾ ವಿದ್ಯಾಕೇಂದ್ರದ ಅಧ್ಯಕ್ಷರಾಗಿ ಗ್ರಾಮೀಣ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ಹಿಂದೂ ಸೇವಾ ಪ್ರತಿಷ್ಠಾನ-ಭಾರತ್ ವಿಕಾಸ್ ಪರಿಷತ್ತುಗಳಲ್ಲಿ ಗಣನೀಯ ಸೇವೆ, ಕೋಮರ್ಲ ಉದ್ದಿಮೆಗಳ ಗುಂಪಿನ ಅಧ್ಯಕ್ಷರಾಗಿ ಉದ್ಯಮರಂಗದಲ್ಲೂ ಸಾಧನೆ, ಎಫ್‌,ಕೆ.ಸಿ.ಸಿ.ಐ ಅಧ್ಯಕ್ಷ, ಬೆಂಗಳೂರು ವಿವಿ ಸೆನೆಟ್ ಸದಸ್ಯ, ಪೀಪಲ್ಸ್ ಟ್ರಸ್ಟ್ ಅಧ್ಯಕ್ಷ ಸೇರಿ ಹತ್ತಾರು ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆಗೈದ ವಿರಳ ಸೇವಾಸಿಂಧು. ರಾಜ್ಯೋತ್ಸವ 2022, ಕೆಂಪೇಗೌಡ ಪ್ರಶಸ್ತಿ ನೀಡಲಾಗಿದೆ.

The short URL of the present article is: https://kalyanasiri.in/j1lr

About Mallikarjun

Check Also

screenshot 2025 11 19 18 50 08 70 6012fa4d4ddec268fc5c7112cbb265e7.jpg

ಸುಳ್ವಾಡಿ ದುರಂತಕ್ಕೆ ಕಾರಣರಾದ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಸಂತ್ರಸ್ತರ ಆಕ್ರೋಶ . Victims' anger over bail granted to …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.