ಕಲ್ಯಾಣಸಿರಿ

ಫೆ.6ರಂದುಚೌಡೇಶ್ವರಿದೇವಿಯನೂತನವಿಗ್ರಹಪ್ರತಿಷ್ಠಾಪನಾ ಮಹೋತ್ಸವ

ತಿಪಟೂರು : ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಶಾಖಾಮಠದ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ಫೆ.6 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಚೌಡೇಶ್ವರಿ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಪೂಜಾ ಮಹೋತ್ಸವವು ನೆರವೇರಲಿದೆ.

ಈ ಸಂದರ್ಭದಲ್ಲಿ ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯವನ್ನು ವಹಿಸಲಿದ್ದು, ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಕೆ.ಷಡಕ್ಷರಿ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಲ್.ಜಗದೀಶ್, ಬೆಂಗಳೂರಿನ ರಾಮಕೃಷ್ಣಪ್ಪ, ಚಲನಚಿತ್ರ ನಿರ್ಮಾಪಕ ಚನ್ನೇಗೌಡ ಭಾಗವಹಿಸಲಿದ್ದಾರೆ ಎಂದು ಮಠದ ಕಾರ್ಯದರ್ಶಿ ಚಂದ್ರಶೇಖರನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮಂಜು ಗುರುಗದಹಳ್ಳಿ

ಎಚ್ ಮಲ್ಲಿಕಾರ್ಜುನ
Editor and Owner Of Kalyansiri.in Kannada Digital News Portal

Leave a Reply

ನಕಲು ಬಲ ರಕ್ಷಿಸಲಾಗಿದೆ