
ಗಂಗಾವತಿ ನಗರದ ಅಮರಜ್ಯೋತಿ ಕನ್ವೆನ್ಷನ್ ಹಾಲ್ ನಲ್ಲಿ ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ವಿಜಯನಗರ (ಹೊಸಪೇಟೆ) ಜಿಲ್ಲೆಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕರಾದ ಶ್ರೀ ವಿಕಾಸ್ ಪುತ್ತೂರು ರವರು ಅಭಿಪ್ರಾಯ ಹಂಚಿಕೊಂಡರು.
ಸಾಮಾಜಿಕ ಜಾಲತಾಣದ ನಾಲ್ಕು ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ಪಕ್ಷದ ಕಾರ್ಯ ಚಟುವಟಿಕೆಗಳನ್ನು ಹಾಗೂ ನಮ್ಮ ಸರಕಾರದ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ನಮ್ಮ ಅತಿ ಮುಖ್ಯ ಕೆಲಸ ನಮ್ಮ ತಂಡ ಮಾಡುತ್ತಿದೆ. ಹೀಗಾಗಿ 2023 ರ ಚುನಾವಣೆಯಲ್ಲೂ ಕೂಡ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ವಿಜಯನಗರ ಕ್ಷೇತ್ರದ ಪ್ರಭಾರಿಗಳು ಮತ್ತು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ಎಚ್. ಗಿರೀಗೌಡರು ಹಾಗೂ ಸಾಮಾಜಿಕ ಜಾಲತಾಣದ ರಾಜ್ಯ ಸಮಿತಿ ಸದಸ್ಯರಾದ ಶ್ರೀ ರಾಘವೇಂದ್ರ ನಾಗೂರು ಮತ್ತು ಕೊಪ್ಪಳ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಮೇಶ್ ನಾಡಿಗೇರ್ ಅವರು, ಗಂಗಾವತಿ ನಗರ ಘಟಕದ ಅಧ್ಯಕ್ಷರಾದ ಶ್ರೀ ಕಾಶಿನಾಥ್ ಚಿತ್ರಗಾರ ರವರು ಮತ್ತು ಗಂಗಾವತಿ ಗ್ರಾಮೀಣ ಘಟಕದ ಅಧ್ಯಕ್ಷರಾದ ಶ್ರೀ ಚನ್ನಪ್ಪ ಮಳಗಿ ರವರು ಮತ್ತು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ್ ಅಮರ ಜ್ಯೋತಿ ರವರು ಮತ್ತು ಗಂಗಾವತಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಶೆಷ್ಠಿ ರವರು ಹಾಗೂ ಬಳ್ಳಾರಿ ವಿಭಾಗದ ಎಲ್ಲಾ ಜಿಲ್ಲೆಗಳ ಮತ್ತು ಮಂಡಲಗಳ ಸಂಚಾಲಕರು ಮತ್ತು ಸಹ ಸಂಚಾಲಕರು ಉಪಸ್ಥಿತರಿದ್ದರು.