Instructions to register Waqf properties on Umeed portal
ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸುತ್ತೋಲೆಯಂತೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ತಕ್ಷಣವೇ ತಮ್ಮ ವಕ್ಫ್ ಆಸ್ತಿಗಳ ದಾಖಲೆಗಳನ್ನು ಉಮೀದ್ ಪೋರ್ಟಲ್ನಲ್ಲಿ ನೋಂದಣಿ ಮಾಡುವಂತೆ ಸೂಚಿಸಿದೆ.
UMEED ಪೋರ್ಟಲ್ https://umeed.minorityaffairs.gov.in/signin ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿ, ತಮ್ಮ ಸಂಬAಧಪಟ್ಟ ವಕ್ಫ್ ಸಂಸ್ಥೆಯ ಎಲ್ಲಾ ವಕ್ಫ್ ಆಸ್ತಿಗಳ ದಾಖಲೆಗಳನ್ನು 30 ದಿನಗಳ ಒಳಗಾಗಿ ಕಡ್ಡಾಯವಾಗಿ ಅಪ್ಲೋಡ್ ಮಾಡಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ವಕ್ಫ್ ಕಚೇರಿಗೆ ಸಂಪರ್ಕಿಸುವAತೆ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
