
The short URL of the present article is: https://kalyanasiri.in/o6t2
ಮ್ಕಕಳು ಕಲಿಕೆಗೆ ಹೆಚ್ಚು ಒತ್ತು ನೀಡಲಿ-ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸಲಹೆ
Special Gram Sabha on Children’s Rights in Vaddarahatti
ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಗಂಗಾವತಿ : ಮಕ- ಮಕ್ಕಳ ಸಮಸ್ಯೆಗಳನ್ನು ಆಲಿಸಲು ಮಕ್ಕಳ ಹಕ್ಕುಗಳ ಗ್ರಾಮಸಭೆಗಳು ಸಹಕಾರಿಯಾಗಿವೆ ಎಂದು ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಹೇಳಿದರು.ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಪಂ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯಲ್ಲಿ ಮಾತನಾಡಿದರು.ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಮಕ್ಕಳು ಉಪಯೋಗಿಸಿಕೊಂಡು ಶಿಕ್ಷಣವಂತರಾಗಬೇಕು. ಕಲಿಕೆ ಸಮಯದಲ್ಲಿ ಮೊಬೈಲ್ ಬಳಕೆಯಿಂದ ದೂರ ಇರಬೇಕು. ಆಟೋಟಗಳ ಜೊತೆಗೆ ಅಭ್ಯಾಸಕ್ಕೆ ಹೆಚ್ಚು ಒತ್ತು ನೀಡಬೇಕು. ಗ್ರಾಪಂ ಗ್ರಂಥಾಲಯದಲ್ಲಿ ದಿನಪತ್ರಿಕೆ, ನಿಯತಕಾಲಿಕೆ, ಸ್ಪರ್ಧಾತ್ಮಕ ತಯಾರಿ ಪುಸ್ತಕಗಳು ಹಾಗೂ ಕಂಪ್ಯೂಟರ್ ಕಲಿಕೆಗೆ ಅವಕಾಶವಿದ್ದು, ಗ್ರಾಪಂ ವ್ಯಾಪ್ತಿಯ ಎಲ್ಲ ಮಕ್ಕಳು ಗ್ರಂಥಾಲಯದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಶಾಲಾ ರಜೆ ದಿನದ ಬೇಸಿಗೆ ಅವಧಿಯಲ್ಲಿ ವಡ್ಡರಹಟ್ಟಿ ಗ್ರಾಪಂನಿಂದ ಬೇಸಿಗೆ ಶಿಬಿರ ಆಯೋಜಿಸಿ ಬಡ ಮ್ಕಕಳಿಗೆ ಪಠ್ಯೇತರ ಚಟುವಟಿಕೆ ಕೈಗೊಂಡು ಕಲಿಕಾ ಆಸಕ್ತಿ ಹೆಚ್ಚಿಸಲಾಗಿದೆ. ಇಂಥ ಶಿಬಿರಗಳ ಲಾಭ ಪಡೆದುಕೊಳ್ಳಬೇಕು. ಗ್ರಾಪಂ ಮಕ್ಕಳ ಸ್ನೇಹಿಯಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಎಲ್ಲ ವಿಷಯಗಳ ಕುರಿತು ಜ್ಞಾನ ಹೊಂದಬೇಕು. ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ತಡೆ ಕುರಿತು ವ್ಯಾಪಕ ಜಾಗೃತಿ ಮೂಡಿಸಲಾಗಿದೆ. ಇಂಥ ಪದ್ಧತಿಗಳು ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆ ಹಾಗೂ ಸಹಾಯವಾಣಿ ನಂಬರ್ ಗೆ ಕರೆ ಮಾಡುವಂತೆ ತಿಳಿಸಿದರು.*ಸಮಸ್ಯೆ ಅವಲತ್ತುಕೊಂಡ ಮಕ್ಕಳು:*
ಶಾಲೆಯ ಬಳಿಯ ರಸ್ತೆಗೆ ಹಂಪ್ಸ್ ಅಳವಡಿಸಿ ಬೆಳಗ್ಗೆ ಮತ್ತು ಶಾಲೆ ಬಿಡುವ ಸಮಯದಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಶಾಲೆಗಳಲ್ಲಿ ಶೌಚಾಲಯ & ಮೂಲಸೌಕರ್ಯ ಕಲ್ಪಿಸಬೇಕು. ಸರಕಾರಿ ಶಾಲೆಗಳಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಿದ್ದು, ಬೀಟ್ ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕು. ಜೊತೆಗೆ ದುರಸ್ತಿಗೊಳಗಾದ ಶಾಲಾ ಕೊಠಡಿಗಳನ್ನು ದುರಸ್ತಿ ಪಡಿಸಲು ಗ್ರಾಪಂ ಸದಸ್ಯರು & ಅಭಿವೃದ್ಧಿ ಅಧಿಕಾರಿಗಳಿಗೆ ಶಾಲಾ ಮಕ್ಕಳು ಕೋರಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಪ್ರತಿಕ್ರಿಯಿಸಿ ‘ ಮಕ್ಕಳ
ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು’ ಎಂದರು.ಗ್ರಾಪಂ ವ್ಯಾಪ್ತಿಯ ವಡ್ಡರಹಟ್ಟಿ ಸಹಿಪ್ರಾ ಶಾಲೆ, ವಡ್ಡರಹಟ್ಟಿ ಕ್ಯಾಂಪ್ ಹಾಗೂ ಆರ್ಹಾಳ ಸಹಿಪ್ರಾ, ತಿಮ್ಮನಾಯಕ ಪ್ರೌಢಶಾಲೆ ಮಕ್ಕಳು ಭಾಗವಹಿಸಿದ್ದರು. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಜಾಗೃತ ಗೀತೆ & ನಾಟಕಗಳನ್ನು ಶಾಲಾ ಮಕ್ಕಳು ಅಭಿನಯಿಸಿ ಗಮನಸೆಳೆದರು.
ಗ್ರಾಪಂ ಉಪಾಧ್ಯಕ್ಷರಾದ ಗೌಸ್ ಸಾಬ್ ತಾಳಕೇರಿ ಅವರು ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರಾದ ಹೊನ್ನುರಬೀ, ಶಾಂತಮ್ಮ, ಸಿಆರ್ ಪಿ ವಿಜಯಕುಮಾರ್, ಅಂಗನವಾಡಿ ವಲಯ ಮೇಲ್ವಿಚಾರಕರಾದ ವಿದ್ಯಾವತಿ, ಗ್ರಾಪಂ ಕಾರ್ಯದರ್ಶಿ ಈಶಪ್ಪ, ವಡ್ಡರಹಟ್ಟಿ ಸಹಿಪ್ರಾ ಶಾಲೆ ಮುಖ್ಯಶಿಕ್ಷಕರಾದ ವೇದಬಾಯಿ, ಗ್ರಾಪಂ ವ್ಯಾಪ್ತಿಯ ಶಾಲೆಗಳ ಸಹ ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಎಲ್ಲ ಸಿಬ್ಬಂದಿಗಳು ಇದ್ದರು.
The short URL of the present article is: https://kalyanasiri.in/o6t2





