
ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ

Shashikumar V. conferred with PhD degree

ಬೆಂಗಳೂರು. ಜ.18: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಲೇಟ್ ವೆಂಕಟಸ್ವಾಮಪ್ಪ ಹಾಗೂ ಶ್ರೀಮತಿ ರತ್ನಮ್ಮ ದಂಪತಿಯ ಪುತ್ರರಾದ ಶಶಿಕುಮಾರ್ ವಿ. ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ಬಿಎ ಆನರ್ಸ್ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು ವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ರವರು ಬೆಂಗಳೂರು ವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಗೋವಿಂದಪ್ಪ ಎಂ. ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಹೆಳವರ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಧ್ಯಯನ (ವಿಶೇಷವಾಗಿ ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ) : ಸ್ವಾತಂತ್ಯೋತ್ತರ ಕಾಲಘಟ್ಟ ವಿಶ್ಲೇಷಣೆ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.




