
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ.. ರವಿ ಚೌಹಾನ್.

Protecting children's rights is everyone's responsibility.. Ravi Chauhan.
ಗಂಗಾವತಿ. ಭಾರತದ ಸಂವಿಧಾನದಲ್ಲಿ ಮಕ್ಕಳಿಗೆ ವಿಶೇಷ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಲಾಗಿದ್ದು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿದೆ ಎಂದು ಎಚ್ ಆರ್ ಸರೋಜಮ್ಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವಿ ಚೌಹಾನ್ ಹೇಳಿದರು. ಅವರು ಎಚ್ ಆರ್ ಸರೋಜಮ್ಮ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾದ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಕ್ಕಳ ಮಾರಾಟ. ಸೇರಿದಂತೆ ದೇವದಾಸಿ ಪದ್ಧತಿ ಆಚರಣೆ ಹೀಗೆ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂದು ತಿಳಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯು ಎಂ ಬಸವರಾಜ್ ಮಾತನಾಡಿ ಮಕ್ಕಳಿಗೆ ಮನೆಯಲ್ಲಿ ಪೋಷಕರು ಶಾಲೆಯಲ್ಲಿ ಶಿಕ್ಷಕರು ಶಿಕ್ಷಣದ ಜೊತೆಗೆ ಗುಣಮಟ್ಟದ ಸಂಸ್ಕಾರ ಜೀವನದ ಮೌಲ್ಯಗಳನ್ನು ತಿಳಿ ಹೇಳುವ ಕಾರ್ಯವಾಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ವಿವೇಕ ಭಾರತಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಂಗಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಗೆ ವಿಶೇಷ ಆಯೋಜಿಸುವುದರ ಮೂಲಕ ಅನ್ನದಾಸೋಹ ನಡೆಸಲಾಯಿತು.




