
ಶಾಲೆಯಲ್ಲಿ ಶೇ.100 ದಾಖಲಾತಿ ಇರುವಂತೆ ನೋಡಿಕೊಳ್ಳಿವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಛಲವಾದಿ ಸೂಚನೆ

Development Officer Suresh Chalawadi instructs to ensure 100% enrollment in schools
ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತಿಯ ಹಳೆ ಕಟ್ಟಡದ ಸಭಾಭವನದಲ್ಲಿ ಇತ್ತೀಚೆಗೆ ಶಿಕ್ಷಣ ಪಡೆ ಹಾಗೂ ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕ್ರಮ ಅನುಷ್ಠಾನದ ಪರಿಶೀಲನಾ ಸಮಿತಿ ರಚನಾ ಸಭೆಯನ್ನು ಹಮ್ಮಿಕೊಂಡು, ಸಮಿತಿಗಳನ್ನು ರಚನೆ ಮಾಡಲಾಯಿತು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಛಲವಾದಿ ಅವರು ಮಾತನಾಡಿ, 6 ರಿಂದ 14 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ರಚನೆಗೊಂಡ ಶಿಕ್ಷಣ ಪಡೆಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವ ಕಾರ್ಯವಾಗಬೇಕು. ನಂತರ ಮಕ್ಕಳು ನಿರಂತರ ಕಲಿಕೆಯಲ್ಲಿ

ತೊಡಗಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿರುತ್ತದೆ. ಶಾಲೆಯಲ್ಲಿ ಶೇ.100 ದಾಖಲಾತಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ವಿವಿಧ ಯೋಜನೆಗಳಲ್ಲಿ ವಿಕಲಚೇತನರಿಗೆ ಇರುವ ಸೌಲಭ್ಯಗಲ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು. ಜೊತೆಗೆ ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈ ವೇಳೆ, ಶಿಶು ಅಭಿವೃದ್ಧಿ ಇಲಾಖೆಯ ಎಸಿಡಿಪಿಒ ಪ್ರಸನ್ನ ಕುಮಾರ್, ಸಮುದಾಯ ಆರೋಗ್ಯ ಅಧಿಕಾರಿ ಮಾಳಮ್ಮ ಎಎನ್ಎಂ ಸುವರ್ಣ, ಸ್ನೇಹ ಸಂಸ್ಥೆಯ ಹುಲಿಗೆಮ್ಮ, ಗ್ರಾಪಂ ಕಾರ್ಯದರ್ಶಿ ಈಶಪ್ಪ, ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶೈಲಶ್ರೀ, ಗ್ರಾಪಂ ವ್ಯಾಪ್ತಿಯ ಸರಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಆಶಾ, ಅಂಗನವಾಡಿ ಕಾರ್ಯಕರ್ತರು.ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಭಾಗವಹಿಸಿದ್ದರು.




