
Medical Education Minister to visit Koppal district on October 6

ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11.15 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಿಮ್ಸ್ ವತಿಯಿಂದ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಆಯೋಜಿಸಿರುವ 450 ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಧರ್ಮಶಾಲಾ ಕಟ್ಟಡದ ಉದ್ಘಾಟನೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳೊAದಿಗೆ ಭಾಗವಹಿಸುವರು.
ಸಂಜೆ 4.30 ಗಂಟೆಗೆ ವಿಶೇಷ ವಿಮಾನದ ಮೂಲಕ ಮಾನ್ಯ ಮುಖ್ಯಮಂತ್ರಿಗಳೊಮದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



