The short URL of the present article is: https://kalyanasiri.in/zaov
ಡಿ.೧೦ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ
Annual General Meeting of the Employees' Association on December 10th
ಗಂಗಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗಂಗಾವತಿ ತಾಲೂಕು ಘಟಕದಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಮೇಲ್ಭಾಗದಲ್ಲಿರುವ ಸಾಂಸ್ಕೃತಿಕ ಭವನದಲ್ಲಿ ಡಿಸೆಂಬರ್ ೧೦ ಬುಧವಾರ ಸಂಜೆ ೬:೦೦ ಗಂಟೆಗೆ ತಾಲೂಕು ಅಧ್ಯಕ್ಷ ಶಿವಶಂಕರ ಕಲ್ಮಠ ಇವರ ಅಧ್ಯಕ್ಷತೆಯಲ್ಲಿ ತಾಲೂಕು ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜರುಗಲಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಹಕ್ಕಂಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಂಘದ ಎಲ್ಲ ಪದಾಧಿಕಾರಿಗಳು, ನಿರ್ದೇಶಕರು, ನಾಮ ನಿರ್ದೇಶಿತರು ಹಾಗು ಸರ್ವ ಸದಸ್ಯರು ತಪ್ಪದೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ.
The short URL of the present article is: https://kalyanasiri.in/zaov
Kalyanasiri Kannada News Live 24×7 | News Karnataka